November 4, 2025

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ

ಮಾಧ್ಯಮವನ್ನು*(PRESS)* ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳು ಮಾಡುತ್ತವೆ. ಪ್ರತಿ ವರ್ಷ ಮೇ 3 ರಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಸತ್ಯವನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮದ ಮೇಲಿದೆ. ಆದರೂ ಕೆಲವೊಮ್ಮೆ ಮಾಧ್ಯಮಗಳಿಗೆ ತಮ್ಮ ಕಾರ್ಯನಿರ್ವಹಿಸುವಾಗ ಬೆದರಿಕೆಗಳು, ಹಿಂಸೆ, ಸೆನ್ಸಾರ್‌ನಂತಹ ಸವಾಲುಗಳು ಎದುರಾಗುತ್ತದೆ. ಸರ್ಕಾರ ಹಾಗೂ ಸಾರ್ವಜನಿಕರು ಮಾಧ್ಯಮಗಳು ಹಾಗೂ ಪತ್ರಕರ್ತರಿಗೆ ನ್ಯಾಯಮಾರ್ಗದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಪೂರಕ ವಾತಾವರಣವನ್ನು ಕಲ್ಪಿಸಬೇಕು. ಪತ್ರಕರ್ತರು ಹಾಗೂ ಮಾಧ್ಯಮರಂಗ ಎದುರಿಸುತ್ತಿರುವ ಸವಾಲು ಹಾಗೂ ಅವರು ಕೆಲಸ ಮಾಡುತ್ತಿರುವ ರೀತಿ ಸುಗಮವಾಗಿದೆಯೇ ಎಂಬುದನ್ನು ತಿಳಿಯುವ ಉದ್ದೇಶದಿಂದ ಪ್ರತಿವರ್ಷ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಇದು ಪತ್ರಕರ್ತರಾಗುವುದು ಸುಲಭದ ಕೆಲಸವಲ್ಲ ಎಂಬುದನ್ನು ನೆನಪಿಸುತ್ತದೆ.

 

1991ರಲ್ಲಿ ಯುನೆಸ್ಕೊ ಸಾಮಾನ್ಯ ಸಮ್ಮೆಳನದ ಶಿಫಾರಸಿನ ನಂತರ 1993ರಲ್ಲಿ ಯುನೈಟೆಡ್‌ ನೇಷನ್ಸ್‌ ಜನರಲ್‌ ಅಸೆಂಬ್ಲಿಯು ಪ್ರತಿ ವರ್ಷ ಮೇ 3 ರಂದು ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲು ಆರಂಭಿಸಿತು. 1994ರಲ್ಲಿ ಮೊದಲ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ದಿನ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ತಿಳಿಸುವ ಜೊತೆಗೆ ಮಾಧ್ಯಮರಂಗದಲ್ಲಿದ್ದು ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪತ್ರಕರ್ತರನ್ನು ನೆನಪಿಸಿಕೊಳ್ಳುವುದು ಹಾಗೂ ಗೌರವಿಸುವ ಕೆಲಸವನ್ನೂ ಮಾಡಲಾಗುತ್ತದೆ.

 

*- ಸಂಪಾದಕರು ✍🏻*

error: Content is protected !!