ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು.
ಆದರೆ, ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ನಿಗಮ್ ಅವರು, ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಸೋನು ನಿಗಮ್ ಅವರ ಕುರಿತು ತೀವ್ರ ಟೀಕೆ ವ್ಯಕ್ತವಾಗುತ್ತಿರುವುದಲ್ಲದೇ, ಬ್ಯಾನ್ ಮಾಡಬೇಕೆಂಬ ಆಗ್ರಹಗಳೂ ಕೇಳಿ ಬರುತ್ತಿವೆ.
ಕನ್ನಡದ ವಿರುದ್ಧ ಸೋನು ನಿಗಮ್ ನೀಡಿದ ಒಂದೇ ಒಂದು ಹೇಳಿಕೆ ಭಾರೀ ವಿವಾದಕ್ಕೆ ಗುರಿಯಾಗಿದೆ. ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಧ್ವನಿಯೆತ್ತಿದ್ದು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡಾಭಿಮಾನವನ್ನು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಹೋಲಿಸಿರುವ ಗಾಯಕ ಸೋನು ನಿಗಮ್ ಅವರ ಅಪಮಾನಕರ ಟೀಕೆಯನ್ನು ಖಂಡಿಸಿ ಹಾಗೂ ಅವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣ ಗೌಡ ಬಣದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಫ್ರೀಡಂ ಪಾರ್ಕಿನ ಆವರಣದಲ್ಲಿ ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಕನ್ನಡ ಶಾಲು ಹಿಡಿದು ಫಲಕಗಳನ್ನು ಪ್ರದರ್ಶಿಸಿ ಸೋನು ನಿಗಮ್ ವಿರುದ್ಧ ಘೋಷಣೆ ಕೂಗಿ , ಭಾಷೆ ಭಾವನಾತ್ಮಕ ವಿಚಾರವಾಗಿದ್ದು , ಕನ್ನಡಾಭಿಮಾನವನ್ನು ಕೆಣಕಿದ್ದಾರೆ. ಅವರನ್ನು ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
*ವರದಿ – ಪ್ರಭಾಕರ ಗೌಡ.(ಪ್ರಭಿ)*

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…