November 4, 2025

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು.ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.ವಿಶ್ವರೂಪ್ ಎಂದೇ ಜನಪ್ರಿಯರಾಗಿದ್ದ ಕಾಮಿಡಿ ಕಿಲಾಡಿಗಳು ವಿಜೇತ, ಉಡುಪಿ ಮೂಲದ ರಾಕೇಶ್ ಪೂಜಾರಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಹಾಸ್ಯ ಕಲಾವಿದ, ನಟ ಶಿವರಾಜ್ ಕೆಆರ್‌ ಪೇಟೆ ಇಂದು (ಮೇ 12) ಬೆಳ್ಳಂ ಬೆಳಗ್ಗೆಯೇ ಈ ಸುದ್ದಿ ಪ್ರಕಟಿಸಿದ್ದು, “ಎಷ್ಟೋ ಮನಸುಗಳ ನಗಿಸಿದ ಆತ್ಮಕ್ಕೆ ಹೇಗೆ ಶಾಂತಿ ಕೋರಲಿ” ಎಂದು ಫೇಸ್‌ಬುಕ್ ಪೋಸ್ಟ್ ಹಾಕಿಕೊಂಡಿದ್ದಾರೆ.ರಾಕೇಶ್ ಪೂಜಾರಿ ಅವರಿಗೆ ರಾತ್ರಿ ವೇಳೆ ದಿಢೀರ್ ಲೋ ಬಿಪಿ ಸಮಸ್ಯೆ ಕಾಡಿದೆ. ಪಲ್ಸ್ ರೇಟ್ ಕಡಿಮೆಯಾಗಿದೆ. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಸುಕಿನ 3.30ರ ಸುಮಾರಿಗೆ ಮೃತಪಟ್ಟರು ಎಂದು ಶಿವರಾಜ್ ಕೆಆರ್‌ ಪೇಟೆ ಮಾಧ್ಯಮಕ್ಕೆ ತಿಳಿಸಿದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು. ಇನ್ನು ರಾಕೇಶ್ ಅವರ ಅಗಲಿಕೆ ಕನ್ನಡ ರಂಗಭೂಮಿ ಮತ್ತು ಕಿರುತೆರೆಗೆ ಭಾರಿ ನಷ್ಟವಾಗಿದೆ. ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಈ ದುಃಖದ ಸುದ್ದಿ ಕೇಳಿ ಶೋಕದಲ್ಲಿ ಮುಳುಗಿದ್ದಾರೆ. ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಶಾಕ್‌ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕೂಡ ‘ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

error: Content is protected !!