November 4, 2025

ಬೇವೂರು ಆದಿಉಡಸಲಮ್ಮ ದೇವಸ್ಥಾನದ ನೂತನ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ

 

ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮಿಗಳಿಂದ ಶಂಕುಸ್ಥಾಪನೆ

ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ದೇವತೆ ಆದಿ ಉಡಸಲಮ್ಮ ದೇವಿಯ ನೂತನ ದೇವಾಲಯ ನಿರ್ಮಾಣಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮಿಗಳಿಂದ ಶಂಕುಸ್ಥಾಪನೆ ನೇರವೇರಿಸಿದರು.

ಸಂದರ್ಭದಲ್ಲಿ ಬೇವೂರು ಮಠದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಸ್ವಾಮಿಗಳು, ಅಂಧರ ಶಾಲೆಯ ಶ್ರೀ ಅನ್ನದಾನೇಶ್ವರನಾಥ ಸ್ವಾಮಿಗಳು, ವಿರಕ್ತ ಮಠದ ಶ್ರೀ ಶಿವರುದ್ರ ಸ್ವಾಮಿಗಳು, ಗೌಡಗೆರೆ ಶ್ರೀ ಕ್ಷೇತ್ರದ ಧರ್ಮದರ್ಶಿ ಡಾ. ಮಲ್ಲೇಶ್ ಗುರೂಜಿ, ಅವರು ದಿವ್ಯ ಸಾನಿದ್ಯ ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರಾದ ಸಿ.ಪಿ.ಯೋಗೇಶ್ವರ್‌ಅವರು ವಹಿಸಿದ್ದರು.

ದೇವಾಲಯದ ಶಂಕುಸ್ಥಾಪನೆಗೂ ಮುನ್ನ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬೆಳ್ಳಿರಥದಲ್ಲಿ ಕೂರಿಸಿ ಪೂಜಾಕುಣಿತ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮಾಡಲಾಯಿತು.

error: Content is protected !!