November 4, 2025

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಜೀವನ್ಮುಖಿ ಪ್ರಶಸ್ತಿಗೆ ನಾಲ್ವರು ಗಣ್ಯಸಾಧಕರ ಆಯ್ಕೆ…

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯ ಸಹಯೋಗದೊಂದಿಗೆ ಜೀವನ್ಮುಖಿ ಪಾಕ್ಷಿಕ ಪತ್ರಿಕೆಯು ನೀಡುತ್ತಿರುವ 15 ನೇ ವರ್ಷದ ಜೀವನ್ಮುಖಿ ಪ್ರಶಸ್ತಿ ಪುರಸ್ಕಾರಕ್ಕೆ ರಾಜ್ಯ ಮಟ್ಟದ ನಾಲ್ಕು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನಾಡೋಜ ಜಸ್ಟೀಸ್ ಶಿವರಾಜ.ವಿ.ಪಾಟೀಲ , ಧಾರ್ಮಿಕ ದತ್ತಿ, ಮುಜರಾಯಿ ಇಲಾಖೆಯ ಆಯುಕ್ತರಾದ ಡಾ. ಎಂ. ವಿ. ವೆಂಕಟೇಶ್ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಹೆಚ್. ಕೆ. ರಾಮು, ಉದ್ಯಮಿ ಎನ್. ರಾಜೇಂದ್ರ ರವರು ಜೀವನ್ಮುಖಿ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಈ ಸಮಾರಂಭವು ಜೂ. 22 ರಂದು ಸಂಜೆ 4 ಗಂಟೆಗೆ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿಗಳಾದ ಗೊ.ರು. ಚೆನ್ನಬಸಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಂಚಾರ ಜಂಟಿ ಪೋಲೀಸ್ ಆಯುಕ್ತರಾದ ಎಂ.ಎನ್. ಅನುಚೇತ್ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಲೇಖಕರು ಹಾಗೂ ಕರ್ನಾಟಕ ಜಾನಪದ ಪರಿಷತ್ತು ನಿಕಟಪೂರ್ವ ಅಧ್ಯಕ್ಷರಾದ ಟಿ.ತಿಮ್ಮೇಗೌಡ ಅಧ್ಯಕ್ಷತೆ ವಹಿಸುವರು.

error: Content is protected !!