November 4, 2025

ಬೆಂಗಳೂರಿನಲ್ಲಿ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ! ದಾಖಲೆಗಳ ಪರಿಶೀಲನೆ…

ಬೆಂಗಳೂರಿ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ಹಾಗೂ ಇತರ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಕುಳಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಸರ್ಕಾರದ ಬೊಕ್ಕಸಕ್ಕೆ 10 ಕೋಟಿಗೂ ಹೆಚ್ಚು ನಷ್ಟವುಂಟು ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿದ್ದಾರೆ.

ಯಲಹಂಕದ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಯಲಹಂಕ ಉಪನಗರದ ನಿವೇಶನ 271 ಸೆಕ್ಟರ್‍ಗೆ ಸಂಬಂಧಿಸಿದಂತೆ ಇಂಜಿನಿಯರ್ ಸೈಯದ್ ಅಸ್ಗರ್ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ. ಇದರಿಂದಾಗಿ ಸರಕಾರದ ಬೊಕ್ಕಸಕ್ಕೆ ಸುಮಾರು 10 ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಸಂಬಂಧ ಸೈಯದ್ ಅಸ್ಗರ್, ಗೋವಿಂದಯ್ಯ ಹಾಗೂ ಸತೀಶ್ ಹರಿಣಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಮೂವರ ನಿವಾಸದಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಆರೋಪಿತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!