ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ (87) ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಮೃತಪಟ್ಟಿದ್ದಾರೆ.ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರ ತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ.
ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆ ಪಾತ್ರದಲ್ಲಿ ಉತ್ತಮ ಅಭಿನಯ ನೀಡಿದ್ದಾರೆ .
ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು.
ಕನ್ನಡದಲ್ಲಿ ಡಾ.ರಾಜ್‌ಕುಮಾರ್, ಕಲ್ಯಾಣ್‌ಕುಮಾರ್, ಉದಯಕುಮಾರ್ ಅವರ ಜೊತೆ ನಟಿಸಿದರು. ತೆಲುಗಿನಲ್ಲಿ ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್ ಅವರ ಜೊತೆ ನಟಿಸಿದರು. ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿಗಣೇಶನ್ ಜೊತೆಗೆ 22 ಹಿಟ್ ಚಿತ್ರಗಳಲ್ಲಿ, ಎಂ.ಜಿ. ರಾಮಚಂದ್ರನ್ ಜೊತೆ 26 ಹಿಟ್ ಚಿತ್ರಗಳಲ್ಲಿ ನಟಿಸಿದರು. ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಜೊತೆ ನಟಿಸಿದ ಸರೋಜಾದೇವಿ, ಚತುರ್ಭಾಷಾ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡ ನಟಿ.
2008ರಲ್ಲಿ ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜೀವಮಾನ ಸಾಧನೆಗಾಗಿ ಸರೋಜಾದೇವಿ ಅವರಿಗೆ ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
1992ರಲ್ಲಿ ಪದ್ಮಭೂಷಣ, 1969ರಲ್ಲಿ ಪದ್ಮಶ್ರೀ ಪಡೆದಿದ್ದಾರೆ. 2009ರಲ್ಲಿ ತಮಿಳುನಾಡು ಸರ್ಕಾರದಿಂದ ‘ಕಲೈಮಾಮಣಿ’ ಜೀವಮಾನ ಸಾಧನೆ ಪ್ರಶಸ್ತಿ, 2009 ಕರ್ನಾಟಕ ಸರ್ಕಾರದಿಂದ ಡಾ.ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ, 2009- ಎರಡನೇ ಬಾರಿಗೆ ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ ಹಾಗೂ 2024ರಲ್ಲಿ ಪ್ರಜಾವಾಣಿ ಸಿನಿ ಸಮ್ಮಾನದ 2ನೇ ಆವೃತ್ತಿಯ ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ.
2001 – ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ
1993 – ತಮಿಳುನಾಡು ಸರ್ಕಾರದ ಎಂಜಿಆರ್ ಪ್ರಶಸ್ತಿ
1988 – ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ
1980 – ಕರ್ನಾಟಕ ರಾಜ್ಯದಿಂದ ಅಭಿನಂದನ-ಕಾಂಚನ ಮಾಲಾ ಪ್ರಶಸ್ತಿ
1969 – ಕುಲ ವಿಳಕ್ಕು ಚಿತ್ರಕ್ಕೆ ಅತ್ಯುತ್ತಮ ನಟಿಯಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ
1965 – ಕರ್ನಾಟಕದಿಂದ ಅಭಿನಯ ಸರಸ್ವತಿ ಗೌರವ
‘ಇತರ ಪ್ರಶಸ್ತಿಗಳು’
2009 – ನಾಟ್ಯ ಕಲಾಧರ್ ಪ್ರಶಸ್ತಿ- ತಮಿಳು ಸಿನಿಮಾ, ಭರತ್ ಕಲಾಚಾರ್ ಚೆನ್ನೈ
2007 – ಕರ್ನಾಟಕ ತೆಲುಗು ಅಕಾಡೆಮಿಯಿಂದ ಗಮನಾರ್ಹ ಸಾಧನೆಗಾಗಿ NTR ಪ್ರಶಸ್ತಿ
2007 – ಚಾರಿಟಬಲ್ ಟ್ರಸ್ಟ್ ಮತ್ತು ರೋಟರಿ ಕ್ಲಬ್ ಆಫ್ ಚೆನ್ನೈನಿಂದ ರೋಟರಿ ಶಿವಾಜಿ ಪ್ರಶಸ್ತಿ
2006 – ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006 – ತಮಿಳು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿಜಯ್ ಪ್ರಶಸ್ತಿ
2003 – ಸರ್ವಾಂಗೀಣ ಸಾಧನೆಗಾಗಿ ದಿನಕರನ್ ಪ್ರಶಸ್ತಿ
1997 – ಚೆನ್ನೈನಲ್ಲಿ ಸಿನಿಮಾ ಎಕ್ಸ್‌ಪ್ರೆಸ್‌ನಿಂದ ಜೀವಮಾನ ಸಾಧನೆ ಪ್ರಶಸ್ತಿಗಳು
1994 – ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿ
2010ರಲ್ಲಿ ಭಾರತೀಯ ವಿದ್ಯಾ ಭವನ ‘ಪದ್ಮಭೂಷಣ ಬಿ. ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ’, ಪ್ರತಿ ವರ್ಷ ಪ್ರದರ್ಶನ ಕಲೆಯ ಕಲಾವಿದರನ್ನು ಗೌರವಿಸುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ಥಾಪಿಸಿತು. ಕೆ.ಜೆ.ಯೇಸುದಾಸ್, ವೈಜಯಂತಿಮಾಲಾ, ಅಂಜಲಿದೇವಿ, ಅಂಬರೀಶ್, ಜಯಂತಿ ಮತ್ತಿತರರು ಈ ಪ್ರಶಸ್ತಿಯನ್ನು ಗಳಿಸಿದ್ದರು.
ಡಿಸಿಎಂ ಡಿಕೆಶಿ ಸಹ ಸರೋಜಾದೇವಿ ನಿಧನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಸಂತಾಪ ಸೂಚಿಸಿದ್ದಾರೆ.ಸರೋಜಾದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ , ಸಂಸದ ಬಸವರಾಜ ಬೊಮ್ಮಾಯಿ , ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

        
                  
                  
                  
                  
More Stories
ಅಶ್ವಿನಿ ಮಾಸದ ಹುಣ್ಣಿಮೆಯ ದಿನದಂದು ಅಂದರೆ ಶೀಗಿ ಹುಣ್ಣಿಮೆಯ ದಿನದಂದು ಶ್ರೀರಾಮನ ಜೀವನ ಚರಿತ್ರೆಯನ್ನು ವಿವರಿಸುವ ರಾಮಾಯಣವನ್ನು ಬರೆದಂತಹ ಮಹಾನ್ ಮಹರ್ಷಿ ವಾಲ್ಮೀಕಿಯವರ ಜನ್ಮ ದಿನವಾಗಿ ವಾಲ್ಮೀಕಿ ಜಯಂತಿಯನ್ನು ನಡೆಸಲಾಗುತ್ತದೆ.
23-8-2025 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನ ಶಿವಮೊಗ್ಗದಲ್ಲಿ ರಾಜ್ಯ ಅಹಿಂದ ಚಳವಳಿ ಸಮಾವೇಶ…
ದೇವನಹಳ್ಳಿ, ಚನ್ನರಾಯಪಟ್ಟಣ ರೈತ ಸಮಿತಿಯಿಂದ ರೈತರಿಗೆ ನ್ಯಾಯ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ…