ಬೆಂಗಳೂರು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗ್ರೇಟರ್ ,ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಕರ್ನಾಟಕದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದೆ. ಬೆಂಗಳೂರು ಸ್ಥಳೀಯ ಪಾಲಿಕೆ ಸೇರಿದಂತೆ ಕರ್ನಾಟಕದ ವಿವಿಧ ಪಾಲಿಕೆಗಳ ಚುನಾವಣೆ ಬಾಕಿ ಇದೆ.ಬೆಂಗಳೂರು ಪಾಲಿಕೆಯ ಚುನಾವಣೆಯು ಬರೋಬ್ಬರಿ 5 ವರ್ಷಗಳಿಂದ ನಡೆದಿಲ್ಲ. ಇದೀಗ ಈ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಕೊನೆಗೂ ಕೂಡಿ ಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಸದ್ದಿಲ್ಲದೆ ಸಿದ್ಧತೆ ಶುರು ಮಾಡಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸುತ್ತಿದೆ. ಈ ಮೂಲಕ ಬೆಂಗಳೂರು ಚುನಾವಣೆಗೆ ಕಾಲ ಸಮೀಪಿಸಿದೆ ಎಂದೇ ಹೇಳಲಾಗುತ್ತಿದೆ.ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಅವರು, ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನಾನು ಸಹ ಸುರ್ಜೇವಾಲಾ ಅವರನ್ನು ಭೇಟಿ ಮಾಡ್ತೇನೆ, ಕಳೆದ ಬಾರಿ ಭೇಟಿ ಸಾಧ್ಯವಾಗಲಿಲ್ಲ. ಕೆಲವು ಮಂತ್ರಿಗಳ ಜತೆ ಸುರ್ಜೇವಾಲಾ ಅವರು ಚರ್ಚೆ ನಡೆಸ್ತಿದ್ದಾರೆ. ಶಾಸಕರ ಜತೆಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ. ಅವರ ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಶಾಸಕರ ಜತೆ ಮಾತಾಡಿದ್ದಾರೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸುಳಿವನ್ನು ನೀಡಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಸದ್ದಿಲ್ಲದೆ ಸಿದ್ಧತೆ ಶುರು ಮಾಡಿಕೊಂಡಿದೆ.
        
                  
                  
                  
                  
More Stories
ಪ್ರದೇಶ ವಾಲ್ಮೀಕಿ ನಾಯಕ ಸಮಾಜ ಸಂಘದ ತಾಲೂಕ ಅಧ್ಯಕ್ಷರನ್ನಾಗಿ ಶ್ರೀ ಮಲ್ಲು ಬಿ ಸಾಲಿ ಆಯ್ಕೆ*
ನವೆಂಬರ್ 1 ರಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ ಸಂಜೆ 5:42 ನಿಮಿಷವಾದರೂ ಧ್ವಜ ಇಳಿಸದ ಶಿಕ್ಷಕ*
ಜಯಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ