November 4, 2025

ಬಡಜನರ ಹಸಿವು ತಣಿಸಲಿದೆ ಕ್ಯಾಂಟೀನ್‌: ಸಚಿವ ದರ್ಶನಾಪುರ, 48 ಲಕ್ಷ ರೂಪಾಯಿ ವೆಚ್ಚದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಬಡಜನರ ಹಸಿವು ತಣಿಸಲಿದೆ ಕ್ಯಾಂಟೀನ್‌: ಸಚಿವ ದರ್ಶನಾಪುರ 48 ಲಕ್ಷ ರೂಪಾಯಿ ವೆಚ್ಚದ ಇಂದಿರಾ ಕ್ಯಾಂಟೀನ್ ಉದ್ಘಾಟನೆ..

ಕೆಂಭಾವಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ರೂ 48 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಶುಕ್ರವಾರ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಿ ಮಾತನಾಡಿದರೆ ಅವರು ಬಹು ನಿರೀಕ್ಷಿತ ಇಂದಿರಾ ಕ್ಯಾಂಟೀನ್ ‘ಹಸಿದ ಹೊಟ್ಟೆಗೆ ಊಟ’ ನೀಡುವ ವ್ಯವಸ್ಥೆ ಇದಾಗಿದೆ. ಗುಣಮಟ್ಟದ ಆಹಾರ ನೀಡುವುದರ ಜೊತೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಪ್ರತಿ ದಿನ ಬೇರೆ ಬೇರೆ ಉಪಾಹಾರ ಹಾಗೂ ಊಟವನ್ನು ಸಿದ್ಧಪಡಿಸಿ ನೀಡಲಾಗುತ್ತದೆ. ಕ್ಯಾಂಟೀನ್ ಹತ್ತಿರವೇ ಬಸ್ ನಿಲ್ದಾಣವೂ ಇದೆ. ಗ್ರಾಮೀಣ ಭಾಗದ ಬಡಜನರಿಗೆ ಈ ಕ್ಯಾಟೀನ್ ಹೆಚ್ಚು ಆಸರೆಯಾಗಲಿದೆ’ ಎಂದು ಅಭಿಪ್ರಾಯಪಟ್ಟರು ಈ ಸಂರ್ಭದಲ್ಲಿ ಪಟ್ಟಣದ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಅನೇಕ ಸಂಘಟನೆಯ ಮುಖಂಡರು ಮತ್ತು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!