November 4, 2025

ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಎನ್ ರಘುವೀರ್ ನಾಯಕ್ ರವರು ವಾಲ್ಮೀಕಿ ಸಮುದಾಯದ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ಅವುಗಳ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು. 

ಇಂದು ರಾಯಚೂರಿನಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಎನ್ ರಘುವೀರ್ ನಾಯಕ್ ರವರು ವಾಲ್ಮೀಕಿ ಸಮುದಾಯದ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ಅವುಗಳ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

 

1) ರಾಯಚೂರಿನಲ್ಲಿ ಸಮುದಾಯಕ್ಕೆ ರುದ್ರಭೂಮಿ ಇಲ್ಲದ ವಿಷಯದ ಬಗ್ಗೆ ಸಭೆಯ ಗಮನಕ್ಕೆ ತಂದಾಗ ಮಾನ್ಯ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಖಡಕ್ಕಾಗಿ ಸೂಚಿಸಿದರು.

 

2) ಅಸ್ಕಿಹಾಳ ಗ್ರಾಮದಲ್ಲಿರುವ ರುದ್ರ ಭೂಮಿಗೆ ಕಾಂಪೌಂಡ್ ನಿರ್ಮಾಣ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಸಭೆಯಲ್ಲಿ ಒತ್ತಾಯಿಸಲಾಯಿತು. ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಮಾನ್ಯ ಆಯುಕ್ತರು ಮಹಾನಗರ ಪಾಲಿಕೆ ಇವರಿಗೆ ಸೂಚಿಸಿ ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಸೂಚಿಸಿದರು.

 

3) ಈಶ್ವರ್ ನಗರದಲ್ಲಿ ದೌರ್ಜನ್ಯ ಪ್ರಕರಣದಲ್ಲಿ ಮರಣ ಹೊಂದಿದ ವೀರೇಶ್ ನಾಯಕ್ ಇವರ ಕುಟುಂಬಕ್ಕೆ ಇಲ್ಲಿಯವರೆಗೂ ಯಾವುದೇ ಪರಿಹಾರ ನೀಡದೆ ಇರುವುದನ್ನು ಸಭೆಯ ಗಮನಕ್ಕೆ ತಂದಾಗ ಸಂಬಂಧಪಟ್ಟ ಮಾನ್ಯ ಎಸ್‌ಪಿ ಅವರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಕೂಡಲೇ ಪರಿಹಾರ ವಿತರಿಸುವಂತೆ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು ಒಂದು ವೇಳೆ ತಡವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು.

 

4) ರಾಯಚೂರಿನಲ್ಲಿ ST ನಕಲಿ ಪ್ರಮಾಣ ಪತ್ರಗಳ ಹಾವಳಿ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ವಿವರಿಸಲಾಯಿತು ಕೂಡಲೇ ಎಲ್ಲಾ ತಾಲೂಕು ದಂಡಾಧಿಕಾರಿಗಳನ್ನು ಸಭೆ ಕರೆದು ಖಡಕ್ಕಾಗಿ ಸೂಚಿಸಲಾಗುವುದೆಂದು ಭರವಸೆ ನೀಡಿದರು.

 

5)ಹಿಂದುಳಿದ ವರ್ಗದ ಕುರುಬ ಆಗಿದ್ದರೂ ನಕಲಿ ಎಸ್ ಟಿ ಪ್ರಮಾಣ ಪತ್ರ ಪಡೆದು ಕಲ್ಯಾಣ ಸತ್ಯ ಪತ್ರಿಕೆಯನ್ನು ಕೆ. ಸತ್ಯನಾರಾಯಣ ಎನ್ನುವವರು ತಮ್ಮ ಹೆಂಡತಿಯಾದ ಕೆ ಅನಿತಾ ಇವರ ಹೆಸರಿನಲ್ಲಿ ಪತ್ರಿಕೆ ಮಾಡಿ ಎಸ್ ಟಿ ಮೀಸಲಾತಿ ದುರ್ಬಳಕೆ ಮಾಡಿಕೊಂಡಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಪ್ರಮಾಣ ಪತ್ರ ರದ್ದುಪಡಿಸುವ ಜೊತೆಗೆ ಅವರ

ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಲಾಯಿತು. ಈಗಾಗಲೇ ಇವರಿಬ್ಬರ ಮಕ್ಕಳ ನಕಲಿ ಎಸ್ ಟಿ ಪ್ರಮಾಣ ಪತ್ರ ರದ್ದುಗೊಳಿಸಲಾಗಿದೆ ಎಂಬುದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಜರುಗಿಸುವುದಾಗಿ ಆಶ್ವಾಸನೆ ನೀಡಿದರು.

 

5) ಮಸ್ಕಿ ತಾಲೂಕಿನಲ್ಲಿ ವಾಲ್ಮೀಕಿ ಭವನ ಭವನದಲ್ಲಿ ತಾಲೂಕು ಪಂಚಾಯಿತಿ ಕಚೇರಿಯಾಗಿ ಮಾರ್ಪಾಡು ಆಗಿರುವುದರ ಬಗ್ಗೆ ಸಭೆಯ ಗಮನಕ್ಕೆ ತಂದಾಗ ಕೇವಲ ಮೂರು ತಿಂಗಳಿನಲ್ಲಿ ಕಚೇರಿಯನ್ನು ಸ್ಥಳಾಂತರ ಗೊಳಿಸಿ ಭವನವನ್ನು ಸಮುದಾಯಕ್ಕೆ ನೀಡುವುದಾಗಿ ಭರವಸೆ ನೀಡಿದರು.

 

6) ಗ್ರಾಮೀಣ ಭಾಗದಲ್ಲಿ ಸಾಕಷ್ಟು ಗ್ರಾಮಗಳಲ್ಲಿ ಶವ ಸಂಸ್ಕಾರ ಮಾಡಲು ರುದ್ರ ಭೂಮಿ ಸಮಸ್ಯೆ ಇರುವುದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದಾಗ ಎಲ್ಲೆಲ್ಲಿ ಸರಕಾರಿ ಭೂಮಿ ಲಭ್ಯವಿದೆಯೋ ಅಲ್ಲಿ ಅನುಕೂಲ ಮಾಡಿಕೊಡಲಾಗುವುದೆಂದು ವಿವರಿಸಿದರು. ಇನ್ನೂ ಅನೇಕ ವಾಲ್ಮೀಕಿ ಸಮಾಜದ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲಾಯಿತು.

 

ಇಂತಿ ನಿಮ್ಮ

ಎನ್ ರಘುವೀರ್ ನಾಯಕ್

ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರು ರಾಯಚೂರು.

error: Content is protected !!