*ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ ನಡೆಯಿತು*
ದಿನಾಂಕ: 29-10-2025 ರಂದು ಮೈಸೂರಿನ “ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ರಾಯಚೂರು ಲೋಕಸಭಾ ಸದಸ್ಯರಾದ ಮಾನ್ಯ ಜಿ. ಕುಮಾರ ನಾಯಕ ಅವರು ಉದ್ಘಾಟನೆ ಮಾಡಿದರು”.
ಶ್ರೀ ಮಹರ್ಷಿ ವಾಲ್ಮೀಕಿಯವರು ಭಾರತೀಯ ಜ್ಞಾನ ಪರಂಪರೆಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ರಾಮಾಯಣ ಮಹಾಕಾವ್ಯವು ಪ್ರಸ್ತುತ ಯುವ ಸಮುದಾಯಕ್ಕೆ ನೈತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಎಂದು ತಿಳಿಸಿದರು
ರಾಮಾಯಣ ಮಹಾಕಾವ್ಯ ಜಗತ್ತಿನ ಹಲವಾರು ಭಾಷೆಗಳಿಗೆ ಅನುವಾದಗೊಂಡಿದೆ. ಸಾಹಿತ್ಯ ಲೋಕದಲ್ಲಿ ಅನೇಕ ಕವಿಗಳ ಮೇಲೆ ಪ್ರಭಾವ ಬೀರಿದೆ. ಇಂತಹ ಮಹಾಕಾವ್ಯವನ್ನು ನೀಡಿದ ಶ್ರೀ ಮಹರ್ಷಿ ವಾಲ್ಮೀಕಿಯವರು ಮಹಾಚೇತನ ಮತ್ತು ಮಹಾಮಾನವತಾವಾದಿ. ಶ್ರೀ ಮಹರ್ಷಿ ವಾಲ್ಮೀಕಿಯವರು ತಪಸ್ಸು ಮಾಡಿ ಮಹಾಕವಿಯಾಗಿ ಸಾಧನೆಯ ಶಿಖರವಾದರು ಎಂದು ಶ್ಲಾಘಿಸಿದರು.
ಹಾಗೆಯೇ ವಿದ್ಯಾರ್ಥಿಗಳು ಪರಿಶ್ರಮ ಏಕಾಗ್ರತೆ, ಅಧ್ಯಯನದ ತಪಸ್ಸನ್ನು ಮಾಡಿ ಸಾಧನೆಯನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಭಾರತೀಯ ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ನಮ್ಮ ಸಮಸ್ಯೆಗಳಿಗೆ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಸಂವಿಧಾನದ ಆಶಯದಂತೆ ಸಮಾಜದಲ್ಲಿ ಸಮತೆ, ವ್ಯಕ್ತಿಗೌರವ, ಮತ್ತು ಸ್ವಾಭಿಮಾನದಿಂದ ಬದುಕಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ ಹಲಸೆ ಅವರು ವಹಿಸಿದ್ದರು. ವಿಶೇಷ ಉಪನ್ಯಾಸವನ್ನು ಪ್ರೊ. ಲೋಲಾಕ್ಷಿ, ಕನ್ನಡ ಅಧ್ಯಯನ ವಿಭಾಗ ಇವರು ನೆರವೇರಿಸಿದರು. ಕಾರ್ಯಕ್ರಮದ ಸಂಯೋಜನಾಧಿಕಾರಿಯಾಗಿ ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್.ಪಿ. ರವರು ಎಲ್ಲರನ್ನೂ ಸ್ವಾಗತಿಸಿದರು…
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಗಣ್ಯರು ಹಾಗೂ ವಿಶ್ವ ವಿದ್ಯಾನಿಲಯದ ಕುಲ ಪತಿಗಳು ಸಾರ್ವಜನಿಕರು ಉಪಸ್ಥಿತರಿದ್ದರು
ವರದಿ👉
ಎಚ್ ಎಮ್ ಹವಾಲ್ದಾರ,
ಅಹಿಂದ ಬಂದು ಪತ್ರಿಕೆ, ಮೈಸೂರು

More Stories
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…
ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಎಚ್ಚರಿಕೆ