November 4, 2025

ಜಯ ಕರ್ನಾಟಕ ತಾಲೂಕು ಘಟಕದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ*

*ಜಯ ಕರ್ನಾಟಕ ತಾಲೂಕು ಘಟಕದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ*

 

*ವಡಗೇರಾ* : ನಗರದ ಹಳೆ ಪೊಲೀಸ್ ಠಾಣಾ ಹತ್ತಿರ ಯುವ ಮುಖಂಡ ಭೀಮಣ್ಣ ಬೂದಿನಾಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅತಿಥಿ ಗಳಾಗಿ ಭಾಗಿಯಾಗಿ ಕನ್ನಡ ಭಾಷೆ ಸಮೃದ್ಧವಾಗಿದೆ ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡರಾದ *ಶ್ರೀ ಬಾಷುಮಿಯ ನಾಯ್ಕೋಡಿ* ಹೇಳಿದರು.ನಂತರ ತಾಲೂಕು ಘಟಕ ಅಧ್ಯಕ್ಷರಾದ *ಶ್ರೀ ಭೀಮಣ್ಣ ಬೂದಿನಾಳ* ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು, ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು.

ಆದರೆ ಕನ್ನಡ ಅಭಿಮಾನ ಇರಲೇ ಬೇಕು,ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕತ್ತಲಿ, ಸಂತೋಷ್ ಬಜ್ಜಿ, ಬಸನಗೌಡ ಜಡಿ ಕುರಕುಂದ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಲ್ಲು ಹಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ D K ಕುರುಕುಂದ, ಶರಣು ತಾಲೂಕು ಪ್ರಧಾನ ಕಾರ್ಯದರ್ಶಿ ತಾಲೂಕು ಯುವ ಘಟಕ ಅಧ್ಯಕ್ಷರಾದ ಹಣಮಂತ ಓಡ್ಕರ್, ತಾಲೂಕ ಉಪಾಧ್ಯಕ್ಷರಾದ ಮುತ್ತಣ್ಣ ಜಯದರ್ ಅಂಗಡಿ, ನಿಂಗು ಬಿಳಾರ್, ಶಿವಶರಣಪ್ಪ ಗೋನಾಲ್,ಸಿದ್ಧಪ್ಪ ರೊಟ್ನಡಿಗಿ ಹಾಗೂ ಇನ್ನಿತರರು ಹಾಜರಿದ್ದರು.

 

ವರದಿ👉

ಎಚ್ ಎಮ್ ಹವಾಲ್ದಾರ,

ಅಹಿಂದ ಬಂದು ಪತ್ರಿಕೆ, ಯಾದಗಿರಿ

error: Content is protected !!