November 4, 2025

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ

*ಶ್ರೀನಗರ:* ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಕುಪ್ವಾರದಲ್ಲಿ ನಾಗರಿಕರ ಮೇಲೆ ಫೈರಿಂಗ್ ನಡೆಸಿ ಉಗ್ರರು ಪರಾರಿಯಾಗಿದ್ದಾರೆ.

ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಮತ್ತು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್ ಬೈಸರನ್ ನಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಮೃತಪಟ್ಟಿದ್ದರು. ಇದಿಗ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ ಉಗ್ರರ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರು, ಭಾರತೀಯ ಸೇನೆಯಿಂದ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

error: Content is protected !!