ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಏ.28 ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಕಸಾಪ ಭವನದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗ,
ಕಲಾ ವಿಭಾಗ, ವಿಜ್ಞಾನ ವಿಭಾಗದಲ್ಲಿ ತಲಾ ೧೦
ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದ್ದು ಅವರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಎಂದು ಸಂಘಟನೆ ವಿದ್ಯಾರ್ಥಿ ಘಟಕದ ಜಿಲ್ಲಾದ್ಯಕ್ಷ ವಿಶ್ವರಾಜ ಪಾಟೀಲ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೋಡಾಲ ವಿರಕ್ತ ಮಠದ ಶ್ರೀ ಪಂಚಮ ಸಿದ್ಧಲಿಂಗ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಸಶಸ್ತ್ರ ಮೀಸಲು ಪಡೆ ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ ಭರತ್ ತಳವಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಮಾಜಿ ಅಧ್ಯಕ್ಷೆ ನಾಗರತ್ನ ಅನಪುರ ಕನ್ನಡಾಂಬೆ ಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ಡಿಡಿಪಿಯು ಚನ್ನಬಸ್ಸಪ್ಪ ಕುಳಗೇರಿ, ಸಾರಿಗೆ ಇಲಾಖೆ ಅಧಿಕಾರಿ ಮಿಲಿಂದ್, ವೈದ್ಯ ಸಂಘದ ಜಿಲ್ಲಾದ್ಯಕ್ಷ ಡಾ.ಚಂದ್ರಕಾಂತ ಪೂಜಾರಿ, ಭೀಮರಾವ್ ಪಾಂಚಾಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು.

More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…