ಯಾದಗಿರ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಆಡಳಿತ ಯಾದಗಿರ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಯಾದಗಿರ ಜಿಲ್ಲಾ ಶಾಖೆ ಅಡಿಯಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಸಮಾರಂಭದ ಕಾರ್ಯಕ್ರಮವನ್ನು ಯಾದಗಿರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಬಿ ಸುಶಿಲಾ ಮೇಡಂ ಸಸಿಗೆ ನೀರು ಹಾಕುವ ಮುಖಾಂತರ ಚಾಲನೆ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿಗಳಾದ ಪೃಥ್ವಿಶಂಕರ ಯಾದಗಿರ ಹಾಗೂ ಅಪಾರಜಿಲ್ಲಾಧಿಕಾರಿಗಳಾದ ಶರಣಬಸಪ್ಪ ಕಪ್ಪಟಗೂಳ ಕರ್ನಾಟಕ ಸರಕಾರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಯಪ್ಪಗೌಡ ಹುಡೆದ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಮತ್ತು ಮುಖ್ಯ ಅಥಿತಿಗಳಾಗಿ ಆಗಮಿಸಿದ ಯಾದಗಿರ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥರಡ್ಡಿ ದರ್ಶನಾಪೂರ ಭಾಗವಹಿಸಿದರು
ಇದೆ ಸಂದರ್ಭದಲ್ಲಿ ಯಾದಗಿರ ಜಿಲ್ಲಾಡಳಿತ ಮತ್ತು ನೌಕರರ ಸಂಘದ ವತಿಯಿಂದ ವಿವಿಧ ಇಲಾಖೆಯ ನೌಕರರ ಸೇವೆ ಮಾಡುತ್ತಿದ್ದವರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಮತ್ತು ಹಲವಾರು ಯಾದಗಿರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಅಧಿಕಾರಿಗಳ ಅನೇಕರು ಉಪಸ್ಥಿತಿ ಇದ್ದರು.
*ವರದಿ – ಹುಲಗಪ್ಪ ಎಂ ಹವಾಲ್ದಾರ್*

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…